ರಾಮನಗರಿ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಉದ್ದೇಶಿತ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಭೂಮಿ ಪೂಜೆಯ ವಿರುದ್ಧ ಅಲಹಾಬಾದ್ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ದೆಹಲಿ ಪತ್ರಕರ್ತ ಸಾಕೇತ್ ಗೋಖಲೆ ಅವರ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿ, ಆರೋಪವು ಆಧಾರ ರಹಿತವಾಗಿದೆ ಎಂದು ಹೇಳಿದೆ.
ಹೈಕೋರ್ಟ್ನ ವಿಭಾಗೀಯ ಪೀಠವು ಅರ್ಜಿಯನ್ನು ಆಲಿಸಿದ ನಂತರ ಅದನ್ನು ವಜಾಗೊಳಿಸಿತು. ಹೀಗಾಗಿ ಅಯೋಧ್ಯೆಯ ರಾಮ ದೇವಾಲಯಕ್ಕೆ ಭೂಮಿಪೂಜೆಗೆ ಮಾರ್ಗ ತೆರವುಗೊಂಡಿದೆ. ಕೊರೊನಾ ಕಾರಣದಿಂದ ದೈಹಿಕ ಅಂತರ ಮತ್ತು ಅದರ ಎಲ್ಲಾ ನಿಯಾಮವಳಿಗಳನ್ನು ಅನುಸರಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತು ಸಂಘಟಕರನ್ನು ನಿರೀಕ್ಷಿಸುತ್ತೇವೆ ಎಂದು ಹೈಕೋರ್ಟ್ ಹೇಳಿದೆ.
ಇದನ್ನೂ ಓದಿ : ಶಿಲಾನ್ಯಾಸ ಸಮಾರಂಭಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ
ಈ ಅರ್ಜಿಯು ಕಲ್ಪನೆಯ ಮೇಲೆ ಆಧಾರಿತವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಂಘಟಕರು ಮತ್ತು ರಾಜ್ಯ ಸರ್ಕಾರ ಕಾರ್ಯಕ್ರಮವನ್ನು ನಡೆಸುತ್ತದೆ ಎಂದು ನ್ಯಾಯಾಲಯವು ಆಶಿಸಿದೆ. ಕಾರ್ಯಕ್ರಮದಲ್ಲಿ ಭೌತಿಕ ಅಂತರವನ್ನು ಅನುಸರಿಸುವುದಿಲ್ಲ ಎಂಬ ಆತಂಕಕ್ಕೆ ಯಾವುದೇ ಆಧಾರವಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಹೀಗಾಗಿ ಅರ್ಜಿಯನ್ನು ವಜಾಗೊಳಿಸಿದೆ.