ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ 55 ವರ್ಷ ದಾಟಿದ ಪೋಲಿಸ್ ಸಿಬ್ಬಂದಿಗಳು ಇದ್ದು, ಜೂ. 27ರಿಂದ ಅವರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 55 ವರ್ಷ ದಾಟಿದ 90 ಜನ ಪೊಲೀಸರಿದ್ದು ಅವರನ್ನು ಜನರ ನೇರ ಸಂಪರ್ಕ ಇಲ್ಲದ ಕರ್ತವ್ಯಗಳಿಗೆ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.