ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ ಹೊರಡಿಸಿದ್ದು, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
6 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು
- ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ – ಬೆಳಗಾವಿ
- ಸಚಿವ ಉಮೇಶ್ ಕತ್ತಿ – ಬಾಗಲಕೋಟೆ
- ಸಚಿವ ಅರವಿಂದ ಲಿಂಬಾವಳಿ – ಬೀದರ್
- ಸಚಿವ ಎಂಟಿಬಿ ನಾಗರಾಜ್ – ಕೋಲಾರ
- ಸಚಿವ ಮುರುಗೇಶ್ ನಿರಾಣಿ – ಕಲಬುರ್ಗಿ
- ಸಚಿವ ಎಸ್ ಅಂಗಾರ – ಚಿಕ್ಕಮಗಳೂರು