ಕೊರೊನಾ ನಿಯಂತ್ರಣದ ದಾಖಲಾತಿ ವಿಭಾಗಕ್ಕೆ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕ

0
172
Tap to know MORE!

ಕೊರೊನಾ ಸೋಂಕು ತಡೆಯುವಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ತೊಡಗಿಸಿಕೊಳ್ಳುತ್ತಿರುವುದರ ಜತೆಗೆ, ಇನ್ನು ಗ್ರಾ.ಪಂ ಕಂಪ್ಯೂಟರ್‌ ಡಾಟಾ ಎಂಟ್ರಿ ಆಪರೇಟರ್‌ಗಳು ಕೈ ಜೊಡಿಸಲಿದ್ದಾರೆ.

ರಾಜ್ಯದ ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾರ್ಯವನ್ನು ಒಂದಿಷ್ಟು ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಬಳಸಿಕೊಳ್ಳಲು ಸರಕಾರ ಮುಂದಾಗಿದೆ.

ಕೋವಿಡ್‌ ನಿಯಂತ್ರಣ ಕಾರ್ಯದ ದಾಖಲಾತಿ ಕೆಲಸ ನಿರ್ವಹಿಸಲು ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಕೇವಲ ಒಂದು ಗಂಟೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಸರಕಾರ ತಿಳಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಥವಾ ಸಮೀಪದ ಪ್ರಾಥಮಿಕ ಅಥವಾ ಸಮುದಾಯ ಆರೋಗ್ಯ ಕೇಂದ್ರದಲ್ಲಿಮಾತ್ರ ಅವರನ್ನು ಬಳಸಿಕೊಳ್ಳಲು ಸರಕಾರ ಮಾರ್ಗಸೂಚಿ ಹೊರಡಿಸಿದೆ.

ಯಾವ ಡಾಟಾ ಎಂಟ್ರಿ ಆಪರೇಟರ್‌ ಎಲ್ಲಿ ಕೆಲಸ ಮಾಡಬೇಕು ಎನ್ನುವುದನ್ನು ಜಿಪಂ ಸಿಇಒ ನಿರ್ಧರಿಸಲಿದ್ದಾರೆ. ಇದಕ್ಕಾಗಿ ಗ್ರಾಮ ಪಂಚಾಯಿತಿಯಲ್ಲಿನ ಕೆಲಸದ ಅವಧಿಯನ್ನು ಒಂದು ಗಂಟೆ ಅವಧಿ ಕಡಿತಗೊಳಿಸಿ, ಆ ಅವಧಿಯಲ್ಲಿ ಆರೋಗ್ಯ ಕೇಂದ್ರಕ್ಕೆ ತೆರಳಿ, ಅಲ್ಲಿ ಕೆಲಸ ಮಾಡಬೇಕು. ಆ ಆಪರೇಟರ್‌ಗಳಿಗೆ ತಾಲೂಕು ಮಟ್ಟದಲ್ಲಿ ತರಬೇತಿ ನೀಡಬೇಕು. ಮತ್ತು ಆಯಾ ವ್ಯಾಪ್ತಿಯ ಉಪವಿಭಾಗಾಧಿಕಾರಿಗಳು ಇದರ ಮೇಲ್ವಿಚಾರಣೆ ನಡೆಸಬೇಕು ಎಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಸರಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಎಲ್ಲಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೊಲೆ ಕಳುಹಿಸಿದ್ದು, ಶೀಘ್ರವೇ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಆರೋಗ್ಯ ಕೇಂದ್ರಗಳಿಗೆ ನೇಮಿಸಿ ಮಾಹಿತಿ ಸಲ್ಲಿಸುವಂತೆ ಕೋರಿದ್ದಾರೆ.

LEAVE A REPLY

Please enter your comment!
Please enter your name here