ಬೆಂಗಳೂರು ಜ.6: ಕೊರೊನಾ ವೈರಸ್ ಭಯದಿಂದ ಶಾಲೆಯನ್ನು ಮುಚ್ಚಿ, ಆನ್ ಲೈನ್ ಕ್ಲಾಸ್ ನಡೆಸಲಾಗುತ್ತಿತ್ತು. ಜನವರಿ ಒಂದರಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಈ ಬೆನ್ನಲ್ಲೇ ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: “ಇದಕ್ಕೆಲ್ಲಾ ಶಾಲೆಯ ಆಡಳಿತ ಮಂಡಳಿ ಕಾರಣ” – ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ!
ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಜೂನ್ ಮೊದಲ ವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
*ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭ : –
ಇಂದು ನಡೆದ ಸಭೆಯಲ್ಲಿ ಕೈ ಗೊಂಡ…
Posted by Suresh Kumar S on Wednesday, 6 January 2021
ಈ ಬಾರಿ ಮಕ್ಕಳಿಗೆ ಸರಿಯಾಗಿ ತರಗತಿಗಳೇ ನಡೆದಿಲ್ಲ. ಆನ್ ಲೈನ್ ಕ್ಲಾಸ್ ನಲ್ಲಿ ಎಲ್ಲರಿಗೂ, ಎಲ್ಲವೂ ಅರ್ಥವಾಗುವುದಿಲ್ಲ. ಆನ್ ಲೈನ್ ಕ್ಲಾಸನ್ನೇ ಆಧರಿಸಿ ಪರೀಕಗ್ಷೆ ನಡೆಸಿದ್ರೆ ಪಾಸ್ ಆಗುವ ಮಕ್ಕಳ ಸಂಖ್ಯೆ ತೀರಾ ಕಡಿಮೆ ಎನಿಸುತ್ತದೆ. ಸದ್ಯ ಜನವರಿಯಿಂದ ತರಗತಿಗಳು ಪ್ರಾರಂಭವಾಗಿದ್ದು, ಸ್ವಲ್ಪಮಟ್ಟಿಗೆ ಮಕ್ಕಳು ಸಿದ್ಧತೆ ಮಾಡಿಕೊಳ್ಳಲು ಅನುಕೂಲವಾಗಿದೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ