ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಲು ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಸಹಕಾರಿ: ಶಾಸಕ ಕೋಟ್ಯಾನ್

0
169
Tap to know MORE!

ಹಳೆಯಂಗಡಿ ಜ.11: “ರೋಗ ಬರುವಾಗ ಬಡವರು ಶ್ರೀಮಂತರು ಎಂದು ನೋಡುವುದಿಲ್ಲ. ರೋಗ ಬಂದಾಗ ಉಳ್ಳವರು ದೊಡ್ಡ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಆದರೆ, ಆರ್ಥಿಕವಾಗಿ ಹಿಂದುಳಿದವರಿಗೆ ಒಳ್ಳೆಯ ಚಿಕಿತ್ಸೆಯಿಂದ ವಂಚಿತರಾಗುತ್ತಾರೆ. ಇಂತಹವರಿಗೆ ಉತ್ತಮ ಗುಣಮಟ್ಟದ ಆಸ್ಪತ್ರೆಯಲ್ಲಿ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಒದಗಿಸುವ ಯೋಜನೆಯೇ “ಆಯುಷ್ಮಾನ್ ಭಾರತ್” ಎಂದು ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಭಿಪ್ರಾಯಪಟ್ಟರು.

ಹಳೆಯಂಗಡಿಯ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಆಶ್ರಯದಲ್ಲಿ ಮಂಡಲದ ಸಭಾಂಗಣದಲ್ಲಿ ನಡೆದ ಆರೋಗ್ಯ ಕರ್ನಾಟಕ ಉಚಿತ ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: ಹಳೆಯಂಗಡಿ : ಸ್ಕಿಪ್ಪಿಂಗ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ

ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮಕ್ಕೆ ಪ್ರಣವ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಒನ್ ಹಾಗೂ ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತವು ಸಹಯೋಗ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯ ಬಳಿಕ, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆಯುಷ್ಮಾನ್ ಭಾರತ್ ಗುರುತಿನ ಚೀಟಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಣವ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಜಿ.ಆರ್.ಪ್ರಸಾದ್, ಆಯುಷ್ಮಾನ್ ಭಾರತ್ ಗುರುತಿನ ಚೀಟಿಯ ಮಹತ್ವ ಹಾಗೂ ಪ್ರಯೋಜನಗಳನ್ನು ಸವಿಸ್ತಾರವಾಗಿ ತಿಳಿಸಿದರು.

ಒಟ್ಟು 526ಕ್ಕೂ ಅಧಿಕ ನಾಗರಿಕರು ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಪಡೆದರು. ಪ್ರತಿ ಗುರುತಿನ ಚೀಟಿಯ ಬಾಬ್ತು ಮತ್ತು ಇತರ ಎಲ್ಲಾ ಖರ್ಚು ವೆಚ್ಚವನ್ನು ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ, ಹಳೆಯಂಗಡಿ ಮತ್ತು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಿನೋದ್ ಕುಮಾರ್ ಬೊಳ್ಳೂರು, ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ, ಹಳೆಯಂಗಡಿ ಇದರ ಅಧ್ಯಕ್ಷರು ಎಸ್.ಎಸ್.ಸತೀಶ್ ಭಟ್, ತಾಲೂಕು ಪಂಚಾಯತ್ ಸದಸ್ಯರಾಗಿರುವ ಜೀವನ್ ಪ್ರಕಾಶ್ ಕಾಮೇರೊಟ್ಟು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕರ ಆರ್ ಅಮೀನ್, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ಟಾ, ಸಲಹಾ ಸಮಿತಿಯ ಅಧ್ಯಕ್ಷರಾದ ಸದಾಶಿವ ಅಂಚನ್, ಮಹಿಳಾ ಮಂಡಲದ ಅಧ್ಯಕ್ಷರಾದ ರೇಷ್ಮಾ ಅಶ್ರಫ್, ಯುವತಿ ಮಂಡಲದ ಅಧ್ಯಕ್ಷರಾದ ದಿವ್ಯಶ್ರೀ ರಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್ ಸ್ವಾಗತಿಸಿ, ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಇಂದುಧರ್ ಹಳೆಯಂಗಡಿ ಧನ್ಯವಾದ ಅರ್ಪಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಸಿಗುವ ಉದ್ಯೋಗವನ್ನು ಶ್ರದ್ಧೆಯಿಂದ ಮಾಡಿದರೆ ಎತ್ತರಕ್ಕೆ ಏರಲು ಸಾಧ್ಯ: ವಿವೇಕ್ ನಂಬಿಯಾರ್

LEAVE A REPLY

Please enter your comment!
Please enter your name here