ಅರ್ನಬ್ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಗೃಹ ಸಚಿವರನ್ನು ಆಗ್ರಹಿಸಿದ ಶಿವಸೇನೆ ಸಂಸದ

0
341
Tap to know MORE!

ಟಿವಿ ಶೋ ಒಂದರ ವೇಳೆ ತಮಗೆ ಅರ್ನಾಬ್ ಗೋಸ್ವಾಮಿ ಅವರು ಅವಮಾನಿಸಿದ ಕಾರಣ ಕೈಮುಗಿದು ಕ್ಷಮೆ ಕೊರಬೇಕೆಂದು ಆಗ್ರಹಿಸಿದ ಶಿವಸೇನೆಯ ನಾಯಕ ಕಿಶೋರ್ ತಿವಾರಿ ಅವರ ಬೆನ್ನಲ್ಲೇ, ಇದೀಗ ಮತ್ತೊಂದು ಬೆಳವಣಿಗೆ ನಡೆದಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವರೊಬ್ಬರ ಹೆಸರನ್ನು ಉಲ್ಲೇಖಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿವಸೇನೆ ಸಂಸದ ಅರವಿಂದ್ ಸಾವಂತ್ ಅವರು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭೇಟಿಯಾಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಆದೇಶ

ಗೃಹ ಸಚಿವರನ್ನು ಭೇಟಿಯಾದ ಹಾಗೂ ಸಲ್ಲಿಸಿದ ಮನವಿ ಪತ್ರದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಪತ್ರಿಕೋದ್ಯಮದ ಹೆಸರಿನಲ್ಲಿ ಅರ್ನಬ್ ಅವರು ಬೇಜವಾಬ್ದಾರಿಯುತವಾಗಿ ಸುದ್ದಿ ಪ್ರಸಾರ ಮಾಡುತ್ತಿದ್ದಾರೆ. ಯಾವುದೇ ಆಧಾರವಿಲ್ಲದೆ ಕ್ಯಾಬಿನೆಟ್ ಸಚಿವರೊಬ್ಬರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ ಎಂದಿದ್ದಾರೆ.

ಸುಶಾಂತ್ ಪ್ರಕರಣದ ಮಾಧ್ಯಮ ವಿಚಾರಣೆ ಮೂಲಕ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾವಂತ್ ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here