ಸರಕಾರದ ಭಯ ಇದ್ದಿದ್ದರೆ ಗಲಭೆ ನಡೆಯುತ್ತಿರಲಿಲ್ಲ: ಯು. ಟಿ ಖಾದರ್

0
274
Tap to know MORE!

ಮಂಗಳೂರು : ಬೆಂಗಳೂರಿನ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿ ನಿಜವಾದ ಅಪರಾಧಿಗಳನ್ನು ಸರಕಾರ ರಕ್ಷಿಸುತ್ತಿದೆ ಎಂದು ಶಾಸಕ ಯು ಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಸರಕಾರದ ಭಯ ಇದ್ದಿದ್ದರೆ ಪುಂಡರು ಈ ರೀತಿ ವರ್ತಿಸುತ್ತಿರಲಿಲ್ಲ. ಇದು ಸರಕಾರದ ವೈಫಲ್ಯವಲ್ಲದೆ ಮತ್ತೇನು ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ತಡೆಯಲಾಗಲಿಲ್ಲ. ಆರೋಪಗಳಿನ್ನೂ ಪತ್ತೆ ಹಚ್ಚಲಾಗಲಿಲ್ಲ. ಪ್ರವಾದಿಗೆ ನಿಂದಿಸಿದ ವ್ಯಕ್ತಿ ಪಕ್ಕದಲ್ಲೇ ಇದ್ದರು ಬಂದಿಸಲಿಲ್ಲ. ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ,ಪೋಲಿಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೋಲಿಸರು ಏನೂ ಮಾಡಿಲ್ಲ, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ‌ ಕಥೆ ಏನಾಯ್ತು ಗೊತ್ತಿಲ್ಲ,ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿದ್ದೀರಿ,ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂದಿಸಿಲ್ಲ?” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here