ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ!

0
151
Tap to know MORE!

ದೇಶಾದ್ಯಂತ ಕೊರೋನಾ ಹಾವಳಿ ಏರುತ್ತಿದ್ದು, ಕಳೆದ ಒಂದು ವಾರದಿಂದ ರಾಜಕಾರಣಿಗಳಲ್ಲಿ ಸೋಂಕು ಕಾಣಿಸುತ್ತಿದೆ. ರಾಜ್ಯದಲ್ಲೂ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ, ಕೆಲ ಶಾಸಕರಲ್ಲಿ ಸೋಂಕು ದೃಢಪಟ್ಟಿತ್ತು. ಇಂದಿನ ಬೆಳವಣಿಗೆಯಲ್ಲಿ, ದ.ಕ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾರಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಇದರ ಕುರಿತು ಖುದ್ದಾಗಿ ಶಾಸಕರೇ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಅವರ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : ಅಯೋಧ್ಯೆಯಲ್ಲಿ ಮೂರು ವಿಶೇಷ ದಾಖಲೆ ಬರೆದ ಮೋದಿ!

“ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣಮಟ್ಟಿನ ಜ್ವರ ಬಿಟ್ಟು ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here