BIG NEWS|ದ.ಕ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ವೀಕೆಂಡ್ ಕರ್ಫ್ಯೂ| ವೈದ್ಯಕೀಯ ಸೇವೆ ಬಿಟ್ಟರೆ ಬೇರೇನೂ ಇಲ್ಲ!

0
109
Tap to know MORE!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು.

ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ ಟಫ್ ರೂಲ್ಸ್ | ಬೆ. 9.ರವರೆಗೆ ಮಾತ್ರ ಅಂಗಡಿ ಓಪನ್

ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಮಾತ್ರವೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇಲ್ಲ. ನಿರ್ಮಾಣ ಸ್ಥಳದಲ್ಲಿಯೇ ಕಾರ್ಮಿಕರು ಲಭ್ಯವಿದ್ದಲ್ಲಿ, ಅಂತಹ ಕಾಮಗಾರಿ ನಡೆಸಬಹುದು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರೋಗಿಗಳು ಮತ್ತು ಅವರ ಆರೈಕೆದಾರರು, ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ. ಮೇ 8 ಮತ್ತು 9 ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಮಾರ್ಗಸೂಚಿಯಂತೆ ನಡೆಸಲು ಅನುಮತಿ ನೀಡಲಾಗಿದೆ.

LEAVE A REPLY

Please enter your comment!
Please enter your name here