BIG NEWS| ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ: ಜಿಲ್ಲಾಧಿಕಾರಿ

0
211
Tap to know MORE!

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜೂ.21ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜುಲೈ 5ರ ವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಪಪಡಿಸಿದ್ದಾರೆ.

ಮಂಗಳೂರು, ಜೂ.20: ದ.ಕ. ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜುಲೈ 5ರವರೆಗೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಆ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಪಪಡಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪ್ರತಿ ದಿನ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಲ್ಲದೆ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಆದರೆ ರಿಕ್ಷಾ ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಇಬ್ಬರು ಪ್ರಯಾಣಿಕರನ್ನು ಕರೆದೊಯ್ಯಬಹುದಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಬೀದಿ ಬದಿ ವ್ಯಾಪಾರ, ದಿನಸಿ ಅಂಗಡಿ, ಮಾಂಸ, ತರಕಾರಿ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here