BIG NEWS| ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ವರ್ಗಾವಣೆಗೆ ಆದೇಶ!

0
65
Tap to know MORE!

ಮೈಸೂರು: ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಲಾಗಿದೆ.

LEAVE A REPLY

Please enter your comment!
Please enter your name here