ಕೊರೋನವೈರಸ್ ಪರೀಕ್ಷೆ ನಡೆಸಿದ್ದೆ. ನನ್ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಷಾ ಹೇಳಿದ್ದಾರೆ. ಪ್ರಸ್ತುತ ಅವರು ಸೋಂಕಿನ ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಮಜುಂದಾರ್-ಶಾ ಹೇಳಿದರು.
67 ವರ್ಷದ ಉದ್ಯಮಿ, ಕಿರಣ್ ಮಜುಂದಾರ್-ಷಾ ಬೆಂಗಳೂರು ಮೂಲದ ಬಯೋಕಾನ್ ಲಿಮಿಟೆಡ್ನ ಮುಖ್ಯಸ್ಥರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
ಬಯೋಕಾನ್ ಮುಖ್ಯಸ್ಥೆ ಈ ಕುರಿತು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ. “ನನ್ನಲ್ಲಿ ಸೋಂಕು ಕಾಣಿಸಿದ್ದರಿಂದ,ಕೋವಿಡ್ ಎಣಿಕೆಗೆ ಸೇರಿಕೊಂಡಿದ್ದೇನೆ. ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ ಮತ್ತು ಅದು ಹಾಗೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.
I have added to the Covid count by testing positive. Mild symptoms n I hope it stays that way.
— Kiran Mazumdar Shaw (@kiranshaw) August 17, 2020
ಇತ್ತೀಚಿನ ದಿನಗಳಲ್ಲಿ ಕೊರೋನವೈರಸ್ಗೆ ಧನಾತ್ಮಕ ಪರೀಕ್ಷೆ ನಡೆಸಿದ ಕರ್ನಾಟಕದ ಹಲವಾರು ಪ್ರಸಿದ್ಧ ವ್ಯಕ್ತಿಗಳ ಗುಂಪಿನಲ್ಲಿ ಮಜುಂದಾರ್-ಷಾ ಕೂಡ ಸೇರಿದ್ದಾರೆ. ಇದಕ್ಕೂ ಮೊದಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ಆರೋಗ್ಯ ಸಚಿವ ಶ್ರೀರಾಮುಲು, ಇತರ ಇಬ್ಬರು ಕ್ಯಾಬಿನೆಟ್ ಮಂತ್ರಿಗಳು ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾರಣಾಂತಿಕ ವೈರಸ್ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ.