ಕಾವೂರು ಮಲ್ಲಿ ಲೇಔಟ್‌ನಲ್ಲಿ ಮಾರಕಾಸ್ತ್ರಗಳಿಂದ ಉದ್ಯಮಿಯೊಬ್ಬರ ಕೊಲೆ!

0
208
Tap to know MORE!

ಮಂಗಳೂರು, ನ.3: ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here