FLASH| ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ| ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತೇರ್ಗಡೆ

0
193
Tap to know MORE!

ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹೆಚ್ಚುತ್ತಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೇ 24ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಮತ್ತು ಪ್ರಥಮ ಪಿಯುಸಿ ಪರೀಕ್ಷೆ ರದ್ದುಗೊಳಿಸಿ, ತೇರ್ಗಡೆಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪರೀಕ್ಷಾ ದಿನಾಂಕಗಳನ್ನು 15-20 ದಿನಗಳ ಮುನ್ನವೇ ಪ್ರಕಟಿಸಲಾಗುತ್ತದೆ. ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಇರಲಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.

LEAVE A REPLY

Please enter your comment!
Please enter your name here