BREAKING| ದ.ಕ, ಉಡುಪಿ ಸೇರಿದಂತೆ ರಾಜ್ಯದ 8.ಜಿಲ್ಲೆಗಳಲ್ಲಿ ಬಾರ್, ರೆಸ್ಟೋರೆಂಟ್‌ಗಳು ಅನಿರ್ದಿಷ್ಟಾವಧಿ ಬಂದ್!

0
477
Tap to know MORE!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ. ಕೆಲ ಜಿಲ್ಲೆಗಳಲ್ಲಿ ಸಿನಿಮಾ ಹಾಲ್​ಗಳಲ್ಲಿ ಶೇ.50ರಷ್ಟು ಅವಕಾಶ, 8 ಜಿಲ್ಲೆಗಳಲ್ಲಿ ಬಾರ್, ಪಬ್​, ಕ್ಲಬ್, ರೆಸ್ಟೋರೆಂಟ್​ಗೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ.

ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್, 6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್, ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಅಂತರ ಕಾಪಾಡಬೇಕು. ಇದನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಱಲಿ, ಮುಷ್ಕರ, ಧರಣಿ ಇತ್ಯಾದಿ ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದ ವ್ಯವಸ್ಥೆ ಮೀರುವಂತಿಲ್ಲ. ಸಾಧ್ಯವಾದಷ್ಟು ಮನೆಯಿಂದಲೇ ಕಚೇರಿ ಕೆಲಸ ಮಾಡಬೇಕು ಎಂದು ಸೂಚಿಸಿದೆ.

ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ, ಪರೀಕ್ಷೆ ಬರೆಯುವ ಹಾಗೂ ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಇತರ ಎಲ್ಲಾ ರೀತಿಯ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ವಸತಿ ಶಾಲೆಗಳು ಹಾಗೂ ಬೋರ್ಡಿಂಗ್‌ ಇರುವ ಶಾಲೆಗಳಲ್ಲಿ, 10, 11, 12ನೇ ತರಗತಿಯ ಬೋರ್ಡ್‌ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ, ವೃತ್ತಿಪರ ಕೋರ್ಸ್‌ ಪರೀಕ್ಷೆ ಬರೆಯುವವರು, ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

LEAVE A REPLY

Please enter your comment!
Please enter your name here