BREAKING| ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಲು ಅರ್ಹರು!

0
136
Tap to know MORE!

ನವದೆಹಲಿ: ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ಅಂದ ಹಾಗೇ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್‌ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11: 30 ಕ್ಕೆ ಕರೋನ ಪರಿ ಸ್ಥಿತಿ ಕುರಿತು ಸಭೆ ನಡೆಸಿದರು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಇಂದು ಬೆಳಗ್ಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ಭಾರತವು 24 ಗಂಟೆಗಳಲ್ಲಿ 2,73,810 ಹೊಸ ಕರೋನ ಪ್ರಕರಣಗಳು ಗಳು, 1,619 ಸಾವುಗಳು ಮತ್ತು 1,44,178 ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಅಂಥ ವರದಿ ಮಾಡಿದೆ. ಒಟ್ಟು ಪ್ರಕರಣಗಳ ಸಂಖ್ಯೆ ಈಗ 1,50,61,919 ಕ್ಕೆ ತಲುಪಿದ್ದು, 19,29,329 ಸಕ್ರಿಯ ಪ್ರಕರಣಗಳು ಮತ್ತು 1,78,769 ಸಾವುಗಳು ಸಂಭವಿಸಿವೆ ಅಂಥ ತಿಳಿಸಿದೆ.

LEAVE A REPLY

Please enter your comment!
Please enter your name here