BREAKING| ಮೊನ್ನೆಯಷ್ಟೇ ಒಂದು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನಸಭೆ ಸ್ಪೀಕರ್ ಕಾಗೇರಿಗೆ ಕೊರೋನಾ!

0
246
Tap to know MORE!

ಬೆಂಗಳೂರು: ಕೊರೋನಾ ಸೋಂಕಿನ ಲಕ್ಷಣಗಳಿಂದ ಪರೀಕ್ಷೆಗೆ ಒಳಗಾಗಿದ್ದಂತ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಎಸ್ ಹೊರಟ್ಟಿಯವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಸಭಾಪತಿ ಬಸವರಾಜ್ ಹೊರಟ್ಟಿಯವರ ಆಪ್ತ ಕಾರ್ಯದರ್ಶಿ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಎಸ್ ಹೊರಟ್ಟಿಯವರು ಕೋವಿಡ್-19 ತಪಾಸಣೆ ಮಾಡಿಸಿದ್ದು, ಸದರಿ ಫಲಿತಾಂಶ ಇಂದು ಬಂದಿರುತ್ತದೆ. ಅದರಂತೆ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೂ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿರುತ್ತದೆ. ಯಾವುದೇ ಕೋವಿಡ್-19 ಸಂಬಂಧಿಸಿದ ರೋಗ ಲಕ್ಷಣಗಳು ಇರುವುದಿಲ್ಲ ಮತ್ತು ಆರೋಗ್ಯವಾಗಿದ್ದಾರೆ.

ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳ ಪ್ರಕಾರ ಮನೆ ನಿಗಾವಣೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಸಭಾಪತಿಗಳ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತವಾಗಿ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮತ್ತೊಂದೆಡೆ ವಿಧಾಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಇಂದು ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಮನೆಯಲ್ಲೇ ಕೊರೋನಾ ಸೋಂಕಿನ ಚಿಕಿತ್ಸೆಯನ್ನು ವೈದ್ಯರ ಸೂಚನೆ ಮೇರೆಗೆ ಪಡೆಯುತ್ತಿದ್ದಾರೆ. ಅವರ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತವಾಗಿ ಕೊರೋನಾ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here