BREAKING| ನಾಳೆಯಿಂದ ರಾಜ್ಯಾದ್ಯಂತ ಹಾಫ್ ಲಾಕ್‌ಡೌನ್ | 14 ದಿನಗಳ ಮಾರ್ಗಸೂಚಿ ಪ್ರಕಟ

0
638
Tap to know MORE!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ರಾಜ್ಯಾದ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾಧ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಆದ್ರೇ ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ ಎಂದರು.

ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗುತ್ತಿದೆ ಎಂದರು.

ಹೀಗಿದೆ ರಾಜ್ಯ ಸರ್ಕಾರದಿಂದ ಕೈಗೊಂಡ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳು

ಯಾವುದೆಲ್ಲಾ ಬಂದ್:

ಶಾಲಾ ಕಾಲೇಜು ಬಂದ್
ಚಿತ್ರ ಮಂದಿರ ಬಂದ್
ವೈನ್ ಸ್ಟೋರ್ ‌ನಲ್ಲಿ ಪಾರ್ಸೆಲ್ ಅನುಮತಿ
ಕ್ರೀಡಾಂಗಣ, ಪಾರ್ಕ್ ಬಂದ್
ದೇವಸ್ಥಾನ, ಚರ್ಚ್ , ಮಸೀದಿ ಬಂದ್
ಐಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್
ಯಾರಿಗೂ ಪಾಸ್ ವ್ಯವಸ್
ಶಾಪಿಂಗ್ ಮಾಲ್ ಬಂದ್

ಯಾವುದಕ್ಕೆ ಅವಕಾಶ

ಲಸಿಕೆ ಹಾಕುವವರಿಗೆ ಹೊರಬರಲು ಅವಕಾಶ
ಅಗತ್ಯ ವಸ್ತುಗಷ್ಟೇ ಅವಕಾಶ
ಅಂತಾರಾರಾಜ್ಯ ಸಂಚಾರಕ್ಕೆ ಅವಕಾಶ
ಮದುವೆಗೆ ಕೇವಲ 50 ಜನಕ್ಕೆ ಮಾತ್ರ ಅವಕಾಶ
ದೂರ ಪ್ರಯಾಣಕ್ಕೆ ಮಾತ್ರ ಬಸ್ ಅವಕಾಶ

 

LEAVE A REPLY

Please enter your comment!
Please enter your name here