ಕೊರೋನಾ : ಉಡುಪಿ 314; ದ ಕ 194; ಕಾಸರಗೋಡು 73

0
79

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 194 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 7075 ಗೆ ಏರಿದ್ದು, 3,374  ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 183 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 3,487 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 6 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 214 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 314 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,919 ಗೆ ಏರಿದೆ.

ಸದ್ಯ 2,512 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 364 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 3,347 ಗೆ ಏರಿದೆ. ಜಿಲ್ಲೆಯಲ್ಲಿ ಇಂದು 5 ಸೋಂಕಿತರ ಬಲಿಯಾಗಿದ್ದು, ಇದುವರೆಗೆ 60 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 73 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 2,588 ಗೆ ಏರಿದ್ದು, 1,123 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 33 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1,452 ಸೋಂಕಿತರು ಚೇತರಿಕೆ ಕಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 11 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ 1,420 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 33,120 ಏರಿಕೆಯಾಗಿದ್ದು, 12,109 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಕೇರಳ ರಾಜ್ಯದಲ್ಲಿ 1,715 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 20,862 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇದುವರೆಗೆ ಒಟ್ಟು 107 ಸೋಂಕಿತರು ಸಾವನ್ನಪ್ಪಿದಂತಾಗಿದೆ.

LEAVE A REPLY

Please enter your comment!
Please enter your name here