ಕೊರೋನಾ : ಉಡುಪಿ – 402; ದ.ಕ – 246; ಕಾಸರಗೋಡು – 79

0
49

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ನಗರದಿಂದ ಗ್ರಾಮಾಂತರ ಪ್ರದೇಶದಡೆಗೂ ಕೊರೋನಾ ವ್ಯಾಪಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 246 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 8,071 ಗೆ ಏರಿದ್ದು, 1,948  ಪ್ರಕರಣಗಳು ಸಕ್ರಿಯವಾಗಿದೆ.

ಜಿಲ್ಲೆಯಲ್ಲಿಂದು 641 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಇದರಿಂದಾಗಿ, ಒಟ್ಟು 5,873 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 6 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸುಮಾರು 250 ಸೋಂಕಿತರು ಕೊರೋನಾಗೆ ಬಲಿಯಾಗಿದ್ದಾರೆ.

ಉಡುಪಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದಿನ ಜಿಲ್ಲಾ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಇಂದು 402 ಸೋಂಕಿತರ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,174 ಗೆ ಏರಿದೆ.

ಸದ್ಯ 2,966 ಸಕ್ರಿಯ ಪ್ರಕರಣಗಳು ಇದೆ‌. ಸೋಂಕಿನ ಹಾವಳಿ ಮುಂದೆ ಇಂದು 290 ಸೋಂಕಿತರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆ 4,938 ಗೆ ಏರಿದೆ. ಜಿಲ್ಲೆಯಲ್ಲಿ ಇದುವರೆಗೆ 70 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳದ ಕಾಸರಗೋಡಿನಲ್ಲಿ ಇಂದು 79 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3,084 ಗೆ ಏರಿದ್ದು, 1,156 ಪ್ರಕರಣಗಳು ಸಕ್ರಿಯವಾಗಿದೆ. ಕೊರೋನಾ ಹಾವಳಿಯ ಮಧ್ಯೆ, ಜಿಲ್ಲೆಯಲ್ಲಿಂದು 28 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1,911 ಸೋಂಕಿತರು ಚೇತರಿಕೆ ಕಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 15 ಸೋಂಕಿತರು ಸಾವನ್ನಪ್ಪಿದ್ದಾರೆ.

ಕೇರಳ ರಾಜ್ಯದಲ್ಲೂ ಬಹಳ ವೇಗವಾಗಿ ಸೋಂಕು ಹರಡುತ್ತಲೇ ಇದೆ. ಇಂದಿನ ವರದಿಯಲ್ಲಿ, ರಾಜ್ಯದಲ್ಲಿ ದಾಖಲೆಯ 1,564 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 39,708 ಏರಿಕೆಯಾಗಿದ್ದು, 13,842 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಕೇರಳ ರಾಜ್ಯದಲ್ಲಿ 766 ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡಿರುತ್ತಾರೆ. ಇದುವರೆಗೆ ರಾಜ್ಯದಲ್ಲಿ 25,688 ಸೋಂಕಿತರು ಗುಣಮುಖರಾಗಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ಇದುವರೆಗೆ ಒಟ್ಟು 130 ಸೋಂಕಿತರು ಸಾವನ್ನಪ್ಪಿದಂತಾಗಿದೆ.

LEAVE A REPLY

Please enter your comment!
Please enter your name here