ಬ್ಯಾಕ್‌ಲಾಗ್ ವಿಷಯಗಳ ಪರೀಕ್ಷೆಯನ್ನೂ ಮಾಡುವಂತೆ ಎಲ್ಲಾ ವಿ.ವಿ.ಗಳಿಗೂ ಸೂಚನೆ : ಡಿಸಿಎಂ

0
156

ಬೆಂಗಳೂರು : ಅಂತಿಮ ವರ್ಷದ ಪರೀಕ್ಷೆ ನಡೀಬೇಕಾ/ಬೇಡವಾ ಎಂಬ ವಿಷಯ ಸುಪ್ರೀಂಕೋರ್ಟ್ ತಲುಪಿದೆ. ಈಗಾಗಲೇ ಎರಡು ದಿನಗಳ ಕಾಲ ವಿಚಾರಣೆಯೂ ನಡೆದಿದ್ದು, ಮುಂದಿನ ವಿಚಾರಣೆಯನ್ನು ಆ.10 ಎಂದು ನಿಗದಿಪಡಿಸಿದೆ.

ಪದವಿ ಪರೀಕ್ಷೆ ನಡೆಯುವ ಬಗ್ಗೆ ವಿದ್ಯಾರ್ಥಿಗಳಿಗಿನ್ನೂ ಗೊಂದಲ ಇರುವ ಮಧ್ಯೆ, ಉನ್ನತ ಶಿಕ್ಷಣ ಸಚಿವ ಮತ್ತೊಂದು ಹೇಳಿಕೆಯನ್ನು ನೀಡಿದ್ದಾರೆ.

ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

ನಮ್ಮ ಉದ್ದೇಶ ಇರುವುದು ಅಂತಿಮ ವರ್ಷದಲ್ಲಿ ಇರುವ ವಿದ್ಯಾರ್ಥಿಗಳು ಪದವಿಯನ್ನು ಮುಗಿಸಿಕೊಂಡು ಹೊರಹೋಗಬೇಕು ಎನ್ನುವುದು. ಇಂತಹ ಸನ್ನಿವೇಶದಲ್ಲಿ ಕೇವಲ ಅಂತಿಮ ವರ್ಷ/ಸೆಮಿಸ್ಟರ್‌ ಪರೀಕ್ಷೆ ನಡೆಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಿಗೆ, ಹಿಂದಿನ ವರ್ಷಗಳ, ಅನುತ್ತೀರ್ಣಗೊಂಡಿರುವ ವಿಷಯಗಳ ಪರೀಕ್ಷೆಗಳಿಗೂ ಅವಕಾಶ ಮಾಡಿಕೊಡಬೇಕಾಗುತ್ತದೆ. ಈ ಕೆಲಸವನ್ನು ಎಲ್ಲ ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here