ಸ್ವಾತಂತ್ರ್ಯೋತ್ಸವ ದಿನದಂದು ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ : ಜಿಲ್ಲಾಧಿಕಾರಿ ಡಾ| ರಾಜೇಂದ್ರ

0
128
Tap to know MORE!

ಮಂಗಳೂರು : ಈ ಬಾರಿ ಸ್ವಾತಂತ್ರ್ಯೋತ್ಸವ ದಿನಾಚರಣೆಯು, ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದ್ದು, ಜಿಲ್ಲಾ ಮಟ್ಟದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದ ಅಂಗವಾಗಿ ಜಿಲ್ಲಾದ್ಯಂತದ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸ್ವಾತಂತ್ರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಉತ್ತಮ ಕಾರ್ಯ ನಿರ್ವಹಿಸಿದ ಪೌರ ಕಾರ್ಮಿಕರು, ಆಶಾ ಕಾರ್ಯಕತೆಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು, ವೈದ್ಯರನ್ನು ಗುರುತಿಸಿ ಸನ್ಮಾನಿಸಲಾಗುವುದು” ಎಂದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ವೇಳೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಬಳಸುವುದು ಕಡ್ಡಾಯ ಎಂದು ಸೂಚಿಸಿದ್ದಾರೆ.

ನಗರದ ಮುಖ್ಯ ವೃತ್ತದಲ್ಲಿ, ಡಿಜಿಟಲ್ ಪರದೆಯನ್ನು ಅಳವಡಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸುವ ಜೊತೆಗೆ ಜಿಲ್ಲಾಡಳಿತದ ವತಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗುವುದು ಎಂದ ಜಿಲ್ಲಾಧಿಕಾರಿ, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here