FLASH| ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ | ಅಂಗಾಂಗ ದಾನ ಮಾಡಲು ಕುಟುಂಬಸ್ಥರ ನಿರ್ಧಾರ

0
329
Tap to know MORE!

ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡು ಕೋಮಾದಲ್ಲಿರುವ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಅಪೊಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ ಎಂದು ಹೇಳಿದರು.

ಐಎಎಸ್ ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್ ಕೊಡಲು ಮುಂದಾದ ‘ಸೂದ್ ಫೌಂಡೇಶನ್’

ಅಂಗಾಂಗ ದಾನ ಮಾಡಲು ನಿರ್ಧಾರ
ಇಂದು ಇಂತಹ ಸ್ಥಿತಿಗೆ ನಮ್ಮ ಸೋದರ, ನಾವು ತಲುಪುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸಂಚಾರಿ ವಿಜಯ್ ಸಮಾಜದಲ್ಲಿರುವ ಜನರ ಕಷ್ಟಗಳಿಗೆ ತುಡಿಯುತ್ತಿದ್ದ ವ್ಯಕ್ತಿ, ಕಷ್ಟದಲ್ಲಿರುವವರಿಗೆ ಯಾವಾಗಲೂ ಸಹಾಯ ಮಾಡುತ್ತಿದ್ದ, ಉತ್ತಮ ನಟ, ನಮ್ಮ ಕುಟುಂಬಕ್ಕೆ ಆಧಾರವಾಗಿದ್ದ, ಜೀವ ಇರುವಾಗ ನಾಲ್ಕು ಜನರಿಗೆ ಸಹಾಯ ಮಾಡುತ್ತಿದ್ದ ಅವನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾನು ಈ ಮಾತು ಹೇಳಬಾರದು, ಆದರೆ ವೈದ್ಯರು ನಮಗೆ ಎಲ್ಲವನ್ನೂ ವಿವರಿಸಿದ್ದಾರೆ, ವೈದ್ಯರ ತಂಡ ಸಾಧ್ಯವಾದಷ್ಟು ಸಹಾಯ ಮಾಡಿದ್ದಾರೆ. ಎಲ್ಲರೂ ಬೆಂಬಲಕ್ಕೆ ನಿಂತಿದ್ದಾರೆ, ಸರ್ಕಾರದ ಮಟ್ಟದಲ್ಲಿ ಡಿಸಿಎಂ ಅಶ್ವಥ ನಾರಾಯಣ ಅವರು ಸಹಾಯ ಮಾಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಧನ್ಯವಾದಗಳು.ಸಮಾಜಕ್ಕೆ ಬೇಕಾಗಿ ದುಡಿಯುತ್ತಿದ್ದ ಅವನ ದೇಹದ ಅಂಗಾಂಗಳನ್ನು ದಾನ ಮಾಡಿ ನಾಲ್ಕು ಜನಕ್ಕೆ ಉಪಯೋಗವಾಗಲಿ, ಅವರು ಇಲ್ಲದಿರುವ ದಿನಗಳಲ್ಲಿಯೂ ಅವರನ್ನು ನಾಲ್ಕು ಜನರಲ್ಲಿ ನಾವು ನೋಡುವಂತಾಗಬೇಕು ಎಂಬುದೇ ನಮ್ಮ ಬಯಕೆಯಾಗಿದೆ ಎಂದರು.

LEAVE A REPLY

Please enter your comment!
Please enter your name here