FLASH| ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

0
188
Tap to know MORE!

ನವದೆಹಲಿ: ಜೂನ್ 7 ರ ಸಂಜೆ 5ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಿ ಸಚಿವಾಲಯದ ಅಧಿಕೃತ ಟ್ವೀಟ್ ಮೂಲಕ ತಿಳಿದು ಬಂದಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣ, ಸರ್ಕಾರದ ಲಸಿಕಾ ಅಭಿಯಾನ ನೀತಿ ಬಗ್ಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ಸಾಧ್ಯತೆಯಿದೆ.

ಜೂನ್ 7 ರಿಂದ ಅನೇಕ ಕಡೆಗಳಲ್ಲಿ ಲಾಕ್ ಡೌನ್ ಹೋಗಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ ದೆಹಲಿಯಲ್ಲಿ ಸೋಂಕು ಹೆಚ್ಚಳದ ನಡುವೆ ಮೆಟ್ರೋ ಸೇವೆ ಆರಂಭಿಸಲು ಮುಂದಾಗಲಾಗಿದೆ. ಕರ್ನಾಟಕದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ. ಅರುಣ್ ಕುಮಾರ್ ಮಿಶ್ರ

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,00,636 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಕಳೆದ ಎರಡು ತಿಂಗಳಲ್ಲಿ ಇದು ಅತ್ಯಂತ ಕಡಿಮೆ ಸಂಖ್ಯೆಯಾಗಿದೆ. ಸತತ 11 ದಿನಗಳಿಂದ 2 ಲಕ್ಷಕ್ಕೂ ಕಡಿಮೆ ದೈನಂದಿನ ಹೊಸ ಪ್ರಕರಣಗಳು ದಾಖಲಾಗಿವೆ. ಇಡೀ ಸರ್ಕಾರದ ವಿಧಾನದಿಂದಾಗಿ ಈ ಫಲಿತಾಂಶ ಬಂದಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಭಾಗಿತ್ವ ಮತ್ತು ನಿರಂತರ ಪ್ರಯತ್ನಗಳ ಫಲ ಇದಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಭಾರತದಲ್ಲಿ ನಿರಂತರವಾಗಿ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ಸತತ ಎರಡನೇ ದಿನ ಕೂಡ ಸಕ್ರಿಯ ಪ್ರಕರಣಗಳು 15 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಇಂದು 14,01,609 ಪ್ರಕರಣಗಳು ದಾಖಲಾಗಿವೆ. ನಿರಂತರ ಏಳು ದಿನಗಳಿಂದ 20 ಲಕ್ಷಕ್ಕೂ ಕಡಿಮೆ ಪ್ರಕರಣಗಳು ದಾಖಲಾಗುತ್ತಿವೆ.

LEAVE A REPLY

Please enter your comment!
Please enter your name here