FLASH| ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಎಲ್ಲಾ ವಿದ್ಯಾರ್ಥಿಗಳು ಪಾಸ್!

0
92
Tap to know MORE!

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ. SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಪ್ರತಿಭೆಗೆ ಅನುಗುಣವಾಗಿ ಫಲಿತಾಂಶ ನೀಡಲಾಗಿದೆ. ಎಂದು ಅವರು ಮಾಹಿತಿ ನೀಡಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದಾರೆ. 4,50,706 ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಹಾಗೂ 2,52,056 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಬಗ್ಗೆ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಫಲಿತಾಂಶವನ್ನು ಇಲ್ಲಿ ಕಾಣಬಹುದು: ದ್ವಿತೀಯ ಪಿಯುಸಿ ಫಲಿತಾಂಶ

600 ಕ್ಕೆ 600 ಅಂಕಗಳನ್ನು ಗಳಿಸಿದ ಟಾಪ್ 5 ಜಿಲ್ಲೆಗಳು

ದಕ್ಷಿಣ ಕನ್ನಡ- 445
ಬೆಂಗಳೂರು ದಕ್ಷಿಣ- 302
ಬೆಂಗಳೂರು ಉತ್ತರ- 261
ಉಡುಪಿ- 149
ಹಾಸನ- 104

600 ಕ್ಕೆ 600 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಸಂಯೋಜನವಾರು ವಿವರ
ಕಲಾ ವಿಭಾಗ- 18
ವಾಣಿಜ್ಯ ವಿಭಾಗ- 292
ವಿಜ್ಞಾನ ವಿಭಾಗ- 1,929
ಒಟ್ಟು- 2,239

ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಎಸ್ಎಸ್ಎಲ್​ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ. ಗ್ರೇಡ್ ಬದಲಿಗೆ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುತ್ತಿರುವುದು ಇದೇ ಮೊದಲ ಬಾರಿ ಆಗಿದೆ.

LEAVE A REPLY

Please enter your comment!
Please enter your name here