FLASH| ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ: ಯಡಿಯೂರಪ್ಪ ಘೋಷಣೆ

0
184
Tap to know MORE!

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

14 ದಿನಗಳ ಕಾಲ ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ| ಏನಿರುತ್ತೆ, ಏನಿರಲ್ಲ?

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here