FLASH| CBSE-ICSE 12 ನೇ ತರಗತಿ ಪರೀಕ್ಷೆ ರದ್ದು

0
212
Tap to know MORE!

ನವದೆಹಲಿ:‌ ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನ ರದ್ದುಗೊಳಿಸಲಾಗಿದೆ.

ಈ ಕುರಿತು ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಸಿಬಿಎಸ್ ಇ ಬೋರ್ಡ್ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದು ಪಡೆಸಲಾಗಿದೆ ಎಂದಿದೆ.

ಸಿಬಿಎಸ್ ಇ ಮತ್ತು ಸಿಐಎಸ್ಸಿಇ ವಿದ್ಯಾರ್ಥಿಗಳಿಗೆ ಈ ವರ್ಷ 12ನೇ ತರಗತಿ ಬೋರ್ಡ್ ಪರೀಕ್ಷೆಗಳು ನಡೆಯುವುದಿಲ್ಲ, ನರೇಂದ್ರ ಮೋದಿ ಸರ್ಕಾರದ ಉನ್ನತ ಮಟ್ಟದ ಸಚಿವರ ನಡುವಿನ ಸಭೆಯ ನಂತರ ಈ ನಿರ್ಧಾರಕ್ಕೆ ಬಂದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು. ಸಭೆಯಲ್ಲಿ, 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಪರಿಗಣಿಸುತ್ತಿರುವ ಎಲ್ಲಾ ಆಯ್ಕೆಗಳ ಬಗ್ಗೆ ಮೋದಿ ಅವರಿಗೆ ವಿವರಿಸಲಾಯ್ತು.
ಆದ್ರೆ, ಕರೋನಾ ಅವಧಿಯಲ್ಲಿ ಸಿಬಿಎಸ್‌ಇ 12 ನೇ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಸಭೆಯ ನಂತರ ತೀರ್ಮಾನಿಸಲಾಯಿತು. ನಂತ್ರ ಈ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು.

ಕರೋನಾ ವೈರಸ್ ಹರಡಿದ ಕಾರಣ, ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರಂತರ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿಗೆ ಪತ್ರ ಬರೆದಿದ್ರು. ಅದೇ ಸಮಯದಲ್ಲಿ, ಮಕ್ಕಳ ಪೋಷಕರ ಕಾಳಜಿಯನ್ನ ಗಮನದಲ್ಲಿಟ್ಟುಕೊಂಡು, ಈ ವರ್ಷವೂ ಕಳೆದ ವರ್ಷದಂತೆ ಸಾಧನೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಬೇಕು ಎಂದು ಒತ್ತಾಯಿಸಿದ್ರು.

LEAVE A REPLY

Please enter your comment!
Please enter your name here