ಬೆಂಗಳೂರು : “ರಾಜ್ಯದಾದ್ಯಂತ ಭಾರಿ ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ರಾಜ್ಯ ಸರ್ಕಾರವು 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ” ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
“ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ 50 ಕೋಟಿ ರೂಗಳನ್ನು ತಕ್ಷಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ” ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದರು.
ಆಗಸ್ಟ್ 2 ರಂದು ಕೋವಿಡ್-19 ಪಾಸಿಟಿವ್ ಅನ್ನು ಪರೀಕ್ಷಿಸಿದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ, ಅವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.
“ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿಯು, ಅವರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರಿಗೆ ನಿರ್ದೇಶನ ನೀಡಿದರು. ಜನರ ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು” ಎಂದು ಅಧಿಕಾರಿ ಹೇಳಿದರು.
[…] […]