ಕಾಂಗ್ರೆಸ್ ಹಿರಿಯ ಮುಖಂಡ ಜಿ.ರಾಮಕೃಷ್ಣ ಇನ್ನಿಲ್ಲ

0
432
Tap to know MORE!

ಮಾಜಿ ಸಚಿವ ಕಾಂಗ್ರೆಸ್ ನಾಯಕ 84 ವರ್ಷದ ರಾಮಕೃಷ್ಣ ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಕಮಲಾಪುರ ಹಾಗೂ ಕಲಬುರಗಿ ಗ್ರಾಮೀಣ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದ ರಾಮಕೃಷ್ಣ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ಹಿಂದೆ ಕರ್ನಾಟಕದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವೀರಪ್ಪ ಮೊಯಿಲಿ ಸರ್ಕಾರದ ಅಡಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಹುದ್ದೆಯನ್ನು ರಾಮಕೃಷ್ಣನವರು ಅಲಂಕರಿಸಿದ್ದರು.

ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಹಿರಿಯ ನಾಯಕನ ನಿಧನದಿಂದ ಅವರ ಮನೆಯಲ್ಲಿ ಶೋಕ ಮಡುಗಟ್ಟಿದೆ.

ಜಿ. ರಾಮಕೃಷ್ಣ ಅವರ ನಿಧನ ವಾರ್ತೆ ತಿಳಿದ ಗಣ್ಯರು ಅವರ ಮನೆಗೆ ತೆರಳಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here