ಹಿಂದೂ-ಮುಸಲ್ಮಾನರು ಶಾಂತಿಯನ್ನು ಕಾಪಾಡುವಂತೆ ನಾನು ಕೇಳಿಕೊಳ್ಳುತ್ತೇನೆ – ಸಿದ್ದರಾಮಯ್ಯ

0
298
Tap to know MORE!

ಕಾವಲ ಬೈರಸಂದ್ರದಲ್ಲಿ ನಡೆದ ಹಿಂಸಾತ್ಮಕ ಘಟನೆ ಮತ್ತು ಜನಸಮೂಹವನ್ನು ಪ್ರಚೋದಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ನಾನು ಖಂಡಿಸುತ್ತೇನೆ. ಈ ಪ್ರದೇಶದ ಹಿಂದೂಗಳು ಮತ್ತು ಮುಸ್ಲಿಮರು ಶಾಂತವಾಗಿರಲು, ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಸಾಮರಸ್ಯದಿಂದ ಬದುಕಲು ನಾನು ವಿನಮ್ರವಾಗಿ ವಿನಂತಿಸುತ್ತೇನೆ” ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ತಡರಾತ್ರಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದವರೇ ಏನೂ ಹೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿಯವರ ವಿರುದ್ಧ ಹೇಳಿಕೆಗಳು ಕೇಳಿ ಬರುತ್ತಿದ್ದವು. ಇದೀಗ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಶಾಸಕರ ಮನೆ ಮೇಲೆ ದಾಳಿ – ಗೋಲಿಬಾರ್ ಗೆ ಮೂವರು ಬಲಿ

“ಘಟನೆಯಲ್ಲಿ ಭಾಗಿಯಾದ ಎಲ್ಲ ಅಪರಾಧಿಗಳನ್ನು ಮತ್ತು ಅವರನ್ನು ಪ್ರಚೋದಿಸಿದವರನ್ನು ಕೂಡಲೇ ಬಂಧಿಸುವಂತೆ ನಾನು ಬೆಂಗಳೂರು ಪೊಲೀಸ್ ಆಯುಕ್ತರೊಂದಿಗೆ ಕೇಳಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ಶಾಂತಿ ಸ್ಥಾಪಿಸುವಲ್ಲಿ ನಾವು ರಾಜ್ಯ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಚರ್ಚಿಸಲು ಮತ್ತು ಪರಿಹರಿಸಲು ಮತ್ತು ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಎರಡೂ ಧರ್ಮದ ಮುಖಂಡರನ್ನು ನಾನು ಕೋರುತ್ತೇನೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here