ನಾಳೆ ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸುವ ವೇದಿಕೆಯನ್ನು ಪ್ರಾರಂಭಿಸಲಿದ್ದಾರೆ ಪ್ರಧಾನಿ ಮೋದಿ

0
46

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸುವ ವೇದಿಕೆಯೊಂದನ್ನು ನಾಳೆ (ಆಗಸ್ಟ್ 13) ಪ್ರಾರಂಭಿಸಲಿದ್ದಾರೆ.

‘ಪಾರದರ್ಶಕ ತೆರಿಗೆ – ಪ್ರಾಮಾಣಿಕತೆಗೆ ಗೌರವ’ ನೀಡುವ ಸಲುವಾಗಿ ಆರಂಭವಾಗುವ ಈ ವೇದಿಕೆಯು, ನೇರ ತೆರಿಗೆ ಸುಧಾರಣೆಗಳನ್ನು ಮತ್ತಷ್ಟು ಮುಂದಕ್ಕೆ ಸಾಗಿಸುತ್ತದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಹೊರತುಪಡಿಸಿ, ವಿವಿಧ ವಾಣಿಜ್ಯ – ವ್ಯಾಪಾರ ಸಂಘಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳ ಸಂಘಗಳು ಮತ್ತು ಶ್ರೇಷ್ಠ ತೆರಿಗೆದಾರರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here