ಬೆಂಗಳೂರು: ರಾಜ್ಯದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಸೇರಿದಂತೆ ಆಶಾ ಕಾರ್ಯಕರ್ತೆಯರು ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ಇದೀಗ ಅವರ ನಿರೀಕ್ಷೆಗೆ ಸಿಹಿ ಸುದ್ದಿಯೊಂದು ಬಂದಿದೆ.
ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್, ಆಯುಷ್ ವೈದ್ಯರ ವೇತನ ಹೆಚ್ಚಳ ಮಾಡಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ : ಸ್ವಾತಂತ್ರ್ಯ ಸಂಭ್ರಮದಲ್ಲಿ ಕೊರೋನಾ ಸೇನಾನಿಗಳಿಗೆ ಸನ್ಮಾನ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರ ವೇತನ ಹೆಚ್ಚಳಕ್ಕೆ ಸಮ್ಮತಿಸಿದ್ದು, ಶೀಘ್ರವೇ ಸಿಎಂ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.