ತುಮಕೂರು : ಜೆಡಿಎಸ್ ಪಕ್ಷದ ಶಿರಾ ಕ್ಷೇತ್ರದ ಶಾಸಕರಾದ ಬಿ.ಸತ್ಯನಾರಾಯಣ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸತ್ಯನಾರಾಯಣ ಅವರು ಕಳೆದ ಕೆಲ ವರ್ಷಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
“ಶಾಸಕ ಸತ್ಯನಾರಾಯಣ ರವರ ಅಕಾಲಿಕ ಸಾವು ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಸತ್ಯನಾರಾಯಣ ಅವರ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬೆಂಗಳೂರಿನ ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಹಿರಿಯ ಮುತ್ಸದ್ದಿ ಹಾಗೂ ಜೆಡಿಎಸ್ ಪಕ್ಷದ ಶಿರಾ ಕ್ಷೇತ್ರದ ಶಾಸಕರಾದ ಬಿ.ಸತ್ಯ ನಾರಾಯಣ ಅನಾರೋಗ್ಯದಿಂದ ನಮ್ಮನಗಲಿ ಹೋಗಿದ್ದಾರೆ.
ಅವರ ಅಕಾಲಿಕ ಸಾವು ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.
ಸತ್ಯನಾರಾಯಣ ಅವರ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 4, 2020