ದೆಹಲಿ : ಜೆಇಇ ಹಾಗೂ ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನುಸುಪ್ರೀಂ ಕೋರ್ಟ್ ವಜಾಗೊಳಿಸಿ ಸೆಪ್ಟೆಂಬರ್ ನಲ್ಲಿ ಪರೀಕ್ಷೆಗಳನ್ನು ಮಾಡಬಹುದೆಂಬ ಆಜ್ಞೆ ಹೊರಡಿಸಿದೆ. ಜಸ್ಟೀಸ್ ಅರುಣ್ ಮಿಶ್ರ ನೇತೃತ್ವದ ನ್ಯಾಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಲಾಗಿತ್ತು.
ಐಐಟಿ ಹಾಗೂ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆಯಾದ ಜೆಇಇ ಹಾಗೂ ನೀಟ್ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೋನವೈರಸ್ ಭೀತಿಯಿಂದಾಗಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದರಿಂದ “ವಿದ್ಯಾರ್ಥಿಗಳ ವೃತ್ತಿಜೀವನವು ಅಪಾಯಕ್ಕೆ ಸಿಲುಕುವಂತಿಲ್ಲ” ಎಂದು ಉನ್ನತ ನ್ಯಾಯಾಲಯ ಹೇಳಿದೆ.
ಎರಡು ಪರೀಕ್ಷೆಗಳನ್ನು ಸೆಪ್ಟೆಂಬರ್ನಲ್ಲಿ ನಡೆಸಲು ನಿರ್ಧರಿಸಲಾಗಿದೆ. “ಜೀವನವನ್ನು ನಿಲ್ಲಿಸಲು ಸಾಧ್ಯವಿಲ್ಲ, ನಾವು ಎಲ್ಲಾ ಸುರಕ್ಷತೆಗಳೊಂದಿಗೆ ಮುಂದುವರಿಯಬೇಕಾಗಿದೆ” ಎಂದು ಸುಪ್ರೀಂ ಕೋರ್ಟ್ನ ಮೂರು ನ್ಯಾಯಾಧೀಶರ ಪೀಠ ಹೇಳಿದೆ.
[…] ಓದಿ : ನಿಗದಿಯಂತೆ ನಡೆಯಲಿದೆ ಜೆಇಇ-ನೀಟ್ ಪರೀಕ್ಷೆ […]
[…] […]