ನಿನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಯಡಿಯುರಪ್ಪ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ, ಬೆಂಗಳೂರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅದಲ್ಲದೆ ಕಳೆದ ಕೆಲವು ದಿನಗಳ ಕಾಲ ಅವರ ಸಂಪರ್ಕಕ್ಕೆ ಬಂದವರನ್ನು ಕೋವಿಡ್ ಪರೀಕ್ಷೆ ಮಾಡಿಸಲು ವಿನಂತಿಸಿದ್ದರು.
ಈ ಕಾರಣದಿಂದಾಗಿ, ರಾಜ್ಯಪಾಲರು ಕರೋನಾ ಆಂಟಿಜೆನ್ ಪರೀಕ್ಷೆಗೆ ಒಳಗಾಗಿದ್ದರು ಮತ್ತು ಇಂದು ಮಧ್ಯಾಹ್ನ ಅದರ ವರದಿ ಬಂದಿದ್ದು, ಅವರಲ್ಲಿ ಸೋಂಕು ಇಲ್ಲ ಎಂದು ರಾಜಭವನದ ಅಧಿಕೃತ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಜುಲೈ 31 ರಂದು ರಾಜ್ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.