ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

0
126
Tap to know MORE!

ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಉನ್ನತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಶುಕ್ರವಾರ ತಮ್ಮ ಅಧಿಕೃತ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದರು.

ಹೆಚ್ಚುತ್ತಿರುವ ಕೋವಿಡ್ -19 ಸಾಂಕ್ರಾಮಿಕದ ಮಧ್ಯೆಯೂ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದವು. ಇದನ್ನು ಅನುಸರಿಸಿ ಪತ್ರಿಕೆಗಳ ತ್ವರಿತ ಮೌಲ್ಯಮಾಪನವೂ ನಡೆಯಿತು. 4,48,560 ಬಾಲಕರು ಮತ್ತು 3,99,643 ಬಾಲಕಿಯರು ಸೇರಿದಂತೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು http://www.kseeb.kar.nic.in ಅಥವಾ http://www.karresults.nic.in ನಲ್ಲಿ ಪಡೆಯಬಹುದು. ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಿ ಕೊಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ಅದಲ್ಲದೆ, ತಮ್ಮ ಅಂಕಗಳ ನಕಲನ್ನು ಅದೇ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

SSLC ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ 10-8-2020 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು.

Posted by Suresh Kumar S on Friday, 7 August 2020

LEAVE A REPLY

Please enter your comment!
Please enter your name here