#KKRvsRCB : ಕೊಲ್ಕತ್ತಾ ತಂಡದ ಇಬ್ಬರಿಗೆ ಕೊರೋನಾ | ಇಂದಿನ ಪಂದ್ಯ ಮುಂದೂಡಿಕೆ

0
165
Tap to know MORE!

ಅಹಮದಾಬಾದ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಪರಿಣಾಮ ಇಂದು ನಡೆಯಬೇಕಾಗಿದ್ದ ಕೆಕೆಆರ್ ಮತ್ತು ಆರ್ ಸಿಬಿ ನಡುವಿನ ಪಂದ್ಯವನ್ನು ಮುಂದೂಡಲಾಗಿದೆ.

ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಹಾಗೂ ವೇಗಿ ಸಂದೀಪ್‌ ಶರ್ಮಾ ಅವರಿಗೆ ಕೊವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಇಂದು(ಮೇ.3) ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್‌ ನಡುವಿನ ಪಂದ್ಯವನ್ನು ಮುಂದೂಡಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತಿಸುತ್ತಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಎಲ್ಲರೂ ಹೋಟೆಲ್ ನಲ್ಲಿ ಐಸೋಲೇಶನ್ ಗೆ ಒಳಗಾಗಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನವೇ ಕೆಕೆಆರ್ ನ ನಿತೀಶ್ ರಾಣಾ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಗಣಮುಖರಾದ ಬಳಿಕವೇ ಅವರು ತಂಡದೊಂದಿಗೆ ಸೇರಿದ್ದರು.

ಇದನ್ನೂ ಓದಿ: PM CARES ಫಂಡ್‌ಗೆ ₹37 ಲಕ್ಷ ದೇಣಿಗೆ ನೀಡಿದ ಆಸ್ಟ್ರೇಲಿಯಾದ ಕ್ರಿಕೆಟಿಗ ಪ್ಯಾಟ್ ಕಮಿನ್ಸ್

LEAVE A REPLY

Please enter your comment!
Please enter your name here