ತಲಕಾವೇರಿಯಲ್ಲಿ ಗುಡ್ಡ ಕುಸಿತ – ನಾಲ್ವರು ಮಣ್ಣಿನಡಿ ಸಿಲುಕಿರುವ ಶಂಕೆ!

1
306
Tap to know MORE!

ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ , ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ, ಎರಡು ಮನೆಗಳ ಮೇಲೆ ಗುಡ್ಡ ಕುಸಿದಿದೆ. ದೇವಸ್ಥಾನದ ಅರ್ಚಕರ ಮನೆಯಾಗಿದ್ದು, ಒಂದು ಮನೆಯ ನಾಲ್ವರು ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾಡಳಿತ ವರದಿ ಮಾಡಿದೆ.

ಪ್ರಧಾನ ಅರ್ಚಕರಾಗಿರುವ ಟಿ.ಎಸ್.ನಾರಾಯಣ್ ಆಚಾರ್, ಅವರ ಪತ್ನಿ ಮತ್ತಿಬ್ಬರು ಅರ್ಚಕರು ನಾಪತ್ತೆಯಾಗಿದ್ದಾರೆ. ಇವರಲ್ಲದೆ 2 ಕಾರು ಮತ್ತು 20ಕ್ಕೂ ಅಧಿಕ ದನ-ಕರುಗಳು ಮಣ್ಣಿನಡಿ ಸಿಲುಕಿರುವ ಸಂಶಯ ವ್ಯಕ್ತವಾಗಿದೆ.

ಇದನ್ನೂ ಓದಿ : ಗುರುಪುರದಲ್ಲಿ ಭೂಕುಸಿತ – ಇಬ್ಬರು ಮಕ್ಕಳು ಸಾವು!

ಘಟನಾ ಸ್ಥಳಕ್ಕೆ ಈಗಾಗಲೇ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎರಡು ಮನೆಗಳ ಪೈಕಿ, ಒಂದು ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

1 COMMENT

LEAVE A REPLY

Please enter your comment!
Please enter your name here