ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷರಿಗೆ ಕೊರೋನಾ!

0
123
Tap to know MORE!

ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್‌ಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಕಛೇರಿಯು ಈ ಕುರಿತು ಹೇಳಿಕೆ ನೀಡಿದ್ದು, ಕೋವಿಡ್ 19 ಸೋಂಕಿಗೆ ಒಳಪಟ್ಟಿರುವ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ಸ್ಥಿತಿಯ ವಿವರಗಳನ್ನು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆಗೆದುಕೊಂಡಿದ್ದಾರೆ ಎಂದಿದೆ.

ಮಹಂತ್ ನೃತ್ಯ ಗೋಪಾಲ್ ದಾಸ್, ಆಗಸ್ಟ್ 5 ರಂದು, ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರದ ‘ಭೂಮಿ ಪೂಜನ’ ಸಮಾರಂಭದಲ್ಲಿಲ ಪ್ರಧಾನಿ ನರೇಂದ್ರ ಮೋದಿ ಮತ್ತು ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಇವರೊಂದಿಗೆ, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವೇದಿಕೆಯಲ್ಲಿ ಪಾಲ್ಗೊಂಡಿದ್ದರು.

ಮಹಂತ್ ನೃತ್ಯ ಗೋಪಾಲ್ ದಾಸ್ ಅವರನ್ನು ಕೂಡಲೆ, ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಜನ್ಮಾಷ್ಟಮಿ ಆಚರಣೆಗೆ ಅವರು ಮಥುರಾಗೂ ಪ್ರಯಾಣಿಸಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here