ಹೆಚ್ಚು ಪರಿಣಾಮಕಾರಿಯಾದ ರಾಷ್ಟ್ರೀಯ ನಾಯಕತ್ವದ ಬೇಡಿಕೆ ಹೆಚ್ಚಾಗುತ್ತಿರುವುದರಿಂದ, ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪಕ್ಷದ ಮುಖ್ಯಸ್ಥರಾಗಲು ಬಯಸದೇ ಇರುವುದರಿಂದ, ಪಕ್ಷದ ಮುಂದಿನ ರಾಷ್ಟ್ರೀಯ ಅಧ್ಯಕ್ಷರು ಗಾಂಧಿಯೇತರ ಕುಟುಂಬದ ವ್ಯಕ್ತಿ ಆಗುವುದು ನಿಶ್ಚಿತ.
ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ನಿಲುವನ್ನು ಸ್ವೀಕರಿಸಿ, ಪಕ್ಷದಲ್ಲಿ ಚರ್ಚಿಸಲಾಗುತ್ತಿರುವ ಹೆಸರುಗಳಲ್ಲಿ ಒಂದು, ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕರ್ಜುನ್ ಖರ್ಗೆ. ಖಾರ್ಗೆ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಒಂದು ಅವಧಿಗೆ ಕಾರ್ಯನಿರ್ವಹಿಸಿದ್ದರು. ಆ ಸಾಮರ್ಥ್ಯದಲ್ಲಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹಲವು ವಾಗ್ದಾಳಿಯನ್ನೂ ನಡೆಸಿದ್ದಾರೆ.
ಇಂದು ನಡೆಯುತ್ತಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಾಯಕತ್ವದ ಬದಲಾವಣೆಯ ಕುರಿತು ಚರ್ಚಿಸುವ ನಿರೀಕ್ಷೆಯಿದೆ. ಸುಶೀಲ್ ಕುಮಾರ್ ಶಿಂಧೆ, ಶಶಿ ತರೂರ್, ಮುಕುಕ್ಲ್ ವಾಸ್ನಿಕ್, ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೆಸರುಗಳೂ ಕೇಳಿ ಬರುತ್ತಿದೆ.
[…] […]