ಮಂಗಳೂರು: ಈ ಹಿಂದೆ ಜನವರಿಯಲ್ಲಿ ಆದಿತ್ಯ ರಾವ್ ಎಂಬ ವ್ಯಕ್ತಿ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಆತಂಕದ ವಾತವಾರಣ ಸೃಷ್ಟಿಸಿದ್ದ. ಇದರ ನಡುವೆ ಬುಧವಾರ ಮತ್ತೊಂದು ಆತಂಕ ಒದಗಿ ಬಂದಿತ್ತು. ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆರ ಬಳಿಕ ಇದು ಸುಳ್ಳು ಕರೆ ಎಂದು ತಿಳಿದು ಬಂದಿದೆ. ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್ ವಾಸುದೇವ ಅವರಿಗೆ ಬುಧವಾರ ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಅವರು ಸಂಬಂಧಪಟ್ಟವರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ನೋಡಿ : ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ : ಶಾಸಕ ವೇದವ್ಯಾಸ್ ಕಾಮತ್
ವಿಮಾನ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ಮಾಡಲಾಗಿದ್ದು, ಈ ಸಂದರ್ಭ ಯಾವುದೇ ಶಂಕಿತ ವಸ್ತು ಪತ್ತೆಯಾಗಿಲ್ಲ. ಹೀಗಾಗಿ ಸುಳ್ಳು ಬೆದರಿಕೆ ಕರೆ ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಈ ವಿಚಾರವಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.