ನಂಜನಗೂಡಿನ ತಾಲೂಕು ಆರೋಗ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 43 ವರ್ಷದ ಡಾ. ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡ ಆರೋಗ್ಯಾಧಿಕಾರಿ.
ಕೊರೊನಾ ಭೀತಿಯಿಂದ , ಅವರ ಪತ್ನಿಯು ಮಕ್ಕಳೊಂದಿಗೆ ಹೆಬ್ಬಾಳದಲ್ಲಿರುವ ತಮ್ಮ ತವರು ಮನೆಯಲ್ಲಿ ವಾಸವಿದ್ದರು. ಹೀಗಾಗಿ ಇವರು ಕಳೆದ ಹಲವು ದಿನಗಳಿಂದ ಆಲನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಒಬ್ಬಂಟಿಯಾಗಿ ಇದ್ದರು. ಗುರುವಾರ ಬೆಳಿಗ್ಗೆ ಇವರ ದೇಹವು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ನಿವಾಸದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕೆಲಸದ ಒತ್ತಡ ಕಾರಣ ಎಂದು ಹೆಸರು ಬಹಿರಂಗಪಡಿಸಲು ಬಯಸದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.