NEET-UG ಪರೀಕ್ಷೆ ನೋಂದಣಿ ಪ್ರಕ್ರಿಯೆ ನಾಳೆ (ಆಗಸ್ಟ್ 10) ಕೊನೆ ದಿನ

0
925
Tap to know MORE!

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ನೋಂದಣಿ ಪ್ರಕ್ರಿಯೆ ನಾಳೆಗೆ (ಆಗಸ್ಟ್ 10) ಮುಕ್ತಾಯಗೊಳ್ಳಲಿದೆ. ನೀಟ್ ಯುಜಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ನಾಳೆಯೊಳಗೆ ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಸೆಪ್ಟೆಂಬರ್ 12ಕ್ಕೆ ನೀಟ್ ಪರೀಕ್ಷೆ ನಡೆಯಲಿದ್ದು, ಇಂಗ್ಲಿಷ್, ಕನ್ನಡ, ಹಿಂದಿ, ಅಸ್ಸಾಮೀಸ್, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಉರ್ದು ಈ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ಆಗಸ್ಟ್ 11 ರಿಂದ ಮಂಗಳೂರು ವಿವಿ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆ ಮುಂದುವರೆಸಲು ಜಿಲ್ಲಾಧಿಕಾರಿ ಆದೇಶ
ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ನೀಟ್ ಯುಜಿ ಪ್ರವೇಶ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ntaneet.nic.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇಲ್ಲಿರುವ ಫಾರ್ಮ್​ನಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ತುಂಬಬೇಕು. ಹಾಗೇ, ನೀಟ್ ಪರೀಕ್ಷೆಯ ಶುಲ್ಕವನ್ನು ಕಟ್ಟಿ, ಅಲ್ಲಿ ಕೇಳಲಾಗಿರುವ ದಾಖಲಾತಿಗಳನ್ನು ಅಪ್​ಲೋಡ್ ಮಾಡಬೇಕು. ಬಳಿಕ ನೀವು ಶುಲ್ಕ ಪಾವತಿಸಿದ ದೃಢೀಕರಣ ಪತ್ರವನ್ನು ಡೌನ್​ಲೋಡ್ ಮಾಡಿಕೊಳ್ಳಿ. ಈ ಬಾರಿ ನೀಟ್ ಪರೀಕ್ಷೆ ಪೇಪರ್ ಮತ್ತು ಪೆನ್​ ಮೋಡ್​ನಲ್ಲಿರಲಿದೆ.

ಈ ಮೊದಲು ನೀಟ್​ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ. 6ಕ್ಕೆ ನಿಗದಿ ಮಾಡಲಾಗಿತ್ತು. ಬಳಿಕ ಆ ದಿನಾಂಕವನ್ನು ಆ. 10ರವರೆಗೆ ವಿಸ್ತರಿಸಲಾಗಿತ್ತು.

LEAVE A REPLY

Please enter your comment!
Please enter your name here