ನಿಗದಿಯಂತೆ ನಡೆಯಲಿದೆ ಜೆಇಇ – ನೀಟ್ ಪರೀಕ್ಷೆ : ಸ್ಪಷ್ಟಪಡಿಸಿದ ಕೇಂದ್ರ

2
412
Tap to know MORE!

ಈ ವರ್ಷದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ 2020) ಮತ್ತು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಯನ್ನು ಮುಂದೂಡಲಾಗುವುದಿಲ್ಲ ಎಂದು ಭಾರತ ಸರ್ಕಾರದ ಮೂಲಗಳು ಖಚಿತಪಡಿಸಿವೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಅಮಿತ್ ಖರೆ ಕೇಂದ್ರದ ನಿರ್ಧಾರವನ್ನು ದೃಢಪಡಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ನಡೆಯಲಿರುವ ನೀಟ್ ಮತ್ತು ಜೆಇಇ ಪರೀಕ್ಷೆಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ವಾರದ ಆರಂಭದಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

“ನೀಟ್ 2020 ಅನ್ನು ಮುಂದೂಡಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ.”
ಅಮಿತ್ ಖರೆ, ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ

2 COMMENTS

LEAVE A REPLY

Please enter your comment!
Please enter your name here