ಆನ್ಲೈನ್ ತರಗತಿಗೆ ಹಾಜರಾಗಲು ಸಿಗದ ಸ್ಮಾರ್ಟ್ ಫೋನ್ – ವಿದ್ಯಾರ್ಥಿನಿ ಆತ್ಮಹತ್ಯೆ!

0
191
Tap to know MORE!

ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಸ್ಮಾರ್ಟ್‌ಫೋನ್ ಕೊಂಡುಕೊಳ್ಳಲು ಸಾಧ್ಯವಾಗದ ಕಾರಣಕ್ಕಾಗಿ ಚಾಮರಾಜನಗರ ಜಿಲ್ಲೆಯ ಸಾಗಡೆ ಎಂಬಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಚಾಮರಾಜನಗರದ ಸಾಗಡೆ ಗ್ರಾಮದಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ; ಕಾರಣ ಇನ್ನೂ ಅಸ್ಪಷ್ಟವಾಗಿದ್ದು, ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನಕ ಓದಿ : ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣ – ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ!

ಯುವತಿಯು ಸೋಮವಾರ ಕೀಟನಾಶಕವನ್ನು ಸೇವಿಸಿದ್ದು, ಸಂಜೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಅವಳು ಸಾಗಡೆ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದಳು.

ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. “ಮೃತ ಬಾಲಕಿಯ ಪೋಷಕರು ಆತ್ಮಹತ್ಯೆಯ ಬಗ್ಗೆ ಲಿಖಿತ ದೂರು ನೀಡಿದ್ದಾರೆ ಮತ್ತು ಆತ್ಮಹತ್ಯೆಗೆ ಹೇಳಲಾದ ಕಾರಣ ನಿಜವೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.

ಆಕೆಯ ಪೋಷಕರು ಸ್ಮಾರ್ಟ್‌ಫೋನ್ ಖರೀದಿಸಲು ಸಾಧ್ಯವಾಗದ ಕಾರಣ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆವೃತ್ತಿಯು ಸುತ್ತುವರೆದಿದ್ದರೂ, ಪೊಲೀಸರು ಇದೀಗ ಅದನ್ನು ಅನುಮೋದಿಸಿಲ್ಲ. ತನಿಖೆಯ ನಂತರವೇ ಸತ್ಯ ಹೊರಬರುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here