ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನಾ!

1
153
Tap to know MORE!

ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ವೈಯಕ್ತಿಕ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದಾಗ ಕೋವಿಡ್ ಪರೀಕ್ಷೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೊರೊನಾ ಸೋಂಕು ತಗಲಿರುವುದು ಬೆಳಕಿಗೆ ಬಂದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಿಂದಿನ ವಾರದಿಂದ ಪ್ರಣಬ್ ಮುಖರ್ಜಿಯವರ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಬೇಕೆಂದು ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಣಬ್ ಮುಖರ್ಜಿ ಅವರು 2012 ರಿಂದ 2017ರವರೆಗೆ ಭಾರತದ ರಾಷ್ಟ್ರಪತಿಯಾಗಿದ್ದರು.

1 COMMENT

LEAVE A REPLY

Please enter your comment!
Please enter your name here