ಜನಪ್ರಿಯ ಆಟ PUBg ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. “ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ” ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಹೇಳಿದೆ.
Government Blocks 118 Mobile Apps Which are Prejudicial to Sovereignty and Integrity of India, Defence of India, Security of State and Public Order.
Press Release issued by @GoI_MeitY regarding blocking of 118 mobile apps https://t.co/VyahsHR5f0
— Ministry of Electronics & IT (@GoI_MeitY) September 2, 2020
“ಈ ಕ್ರಮವು ಕೋಟಿ ಭಾರತೀಯ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ. ಈ ನಿರ್ಧಾರವು ಭಾರತೀಯ ಸೈಬರ್ಪೇಸ್ನ ಸುರಕ್ಷತೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿತ ಕ್ರಮವಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.