ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಚುನಾವಣಾ ಆಯುಕ್ತರಾಗಿ ನೇಮಕ

0
329
Tap to know MORE!

ನವದೆಹಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವಾಲಯ ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ತಮ್ಮ ಕಚೇರಿಯನ್ನು ತೊರೆದ ದಿನ ಶ್ರೀ ರಾಜೀವ್ ಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊರಹೋಗುವ ಚುನಾವಣಾ ಆಯುಕ್ತರು, ಮುಂದೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್‌ನ ಉಪಾಧ್ಯಕ್ಷರಾಗರಾಗಲಿದ್ದಾರೆ.

ಶ್ರೀ ರಾಜೀವ್ ಕುಮಾರ್ ಜಾರ್ಖಂಡ್ ಕೇಡರ್‌ನಿಂದ 1984 ರ ಬ್ಯಾಚ್ನ ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ.
ಶ್ರೀ ರಾಜೀವ್ ಕುಮಾರ್ ಅವರು ಹಲವಾರು ಕ್ಷೇತ್ರಗಳಲ್ಲಿ ಸಾರ್ವಜನಿಕ ನೀತಿ ಮತ್ತು ಆಡಳಿತದಲ್ಲಿ 30 ವರ್ಷಗಳಿಗಿಂತ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ. ಅವರು ಮಾಸ್ಟರ್ ಆಫ್ ಪಬ್ಲಿಕ್ ಪಾಲಿಸಿ ಮತ್ತು ಸಸ್ಟೈನಬಿಲಿಟಿ ಜೊತೆಗೆ ಬಿಎಸ್ಸಿ ಮತ್ತು ಕಾನೂನು ಪದವಿಗಳನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here