ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಖ್ಯಾತ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್

0
104

ಮಾದಕವಸ್ತು ಜಾಲದ ಜೊತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ರಾಗಿಣಿ ಸ್ನೇಹಿತ ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುರುವಾರ ನೋಟಿಸ್ ಜಾರಿ ಮಾಡಿದ್ದರು.

ಬೆಂಗಳೂರಿನ ಡ್ರಗ್ ಪೆಡ್ಲರ್ ಜೊತೆಗೆ ಮಲಯಾಳಂ ಚಿತ್ರರಂಗದ ನಂಟು ಇರುವುದು ಗೊತ್ತಾಗಿದೆ. ಕೆಲವು ಮಲಯಾಳಂ ನಟರೊಂದಿಗೆ ಬೆಂಗಳೂರಿನ ವ್ಯಕ್ತಿ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದ್ದು, ತನಿಖೆ ಮುಂದುವರೆದಿದೆ

LEAVE A REPLY

Please enter your comment!
Please enter your name here